ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ

ಮೈಸೂರು, ಅಕ್ಟೋಬರ್​, 12,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ಸಕಲ ಸಿದ್ಧತೆಗಳು ನಡೆಯುತ್ತಿದೆ.

750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ಆನೆ ರಾಜ ಗಾಂಭಿರ್ಯದಿಂದ ಹೆಜ್ಜೆ ಹಾಕಲಿದ್ದಾನೆ

ಮಧ್ಯಾಹ್ನ ಶುಭ ಮಕರ‌ ಲಗ್ನದಲ್ಲಿ 1.41ರಿಂದ 2.10ರ ನಡುವೆ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ  ಪೂಜೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ ಕುಂಭ ಲಗ್ನ 4 ರಿಂದ 4.30ರ ನಡುವೆ ಜಂಬೂಸವಾರಿಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕ ಬಳಿಕ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಲಿದ್ದು ಗಜಪಡೆಯ ಇತರೆ ಆನೆಗಳು ಸಾಥ್ ನೀಡಲಿವೆ. ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ಸಾಗಲಿದ್ದು ನಂತರ ಪಂಜಿನ ಕವಾಯತು ಮೈದಾನದಲ್ಲಿ ರಾತ್ರಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜಂಬೂಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಅಪಾರ ಜನರು ಕಾತರರಾಗಿದ್ದಾರೆ.

Key words: Countdown, Mysore Dasara Jambu savari