ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪೂಜೆ ಸಲ್ಲಿಕೆ

ಮೈಸೂರು,ಅಕ್ಟೋಬರ್,12,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದರು.

ಈ ವೇಳೆ ಸುತ್ತೂರು ಶ್ರೀಗಳನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ ದಸರಾ ಶುಭಾಶಯ ಕೋರಿದರು. ಈ ವೇಳೆ ಸುತ್ತೂರು ಶ್ರೀಗಳು ಸಿಎಂ ಸಿದ್ದರಾಮಯ್ಯರನ್ನ ಸನ್ಮಾನಿಸಿದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಈ ಬಾರಿ ರಾಜ್ಯದಲ್ಲಿ ಚೆನ್ನಾಗಿ ಮಳೆ ಬೆಳೆ ಆಗಿದೆ ರೈತರಿಗೆ  ಉತ್ತಮ ಬೆಳೆಯಾಗಿದೆ. ಇದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದರು.

Key words: mysore dasara, CM Siddaramaiah, visits, Sattur math