ಇಂದು ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ: ರಾಜ್ಯದ 3 ಉಪಚುನಾವಣೆಗೂ ಡೇಟ್ ಫಿಕ್ಸ್?

ನವದೆಹಲಿ,ಅಕ್ಟೋಬರ್,15,2024 (www.justkannada.in): ಇಂದು ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.

ಇಂದು ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್‌ನಲ್ಲಿ ತಿಂಗಳಲ್ಲಿ ಕೊನೆಗೊಳ್ಳಲಿದೆ.  81 ಸದಸ್ಯರ ಜಾರ್ಖಂಡ್‌ ವಿಧಾನಸಭೆಯ ಅವಧಿ ಜನವರಿ 5, 2025ರಂದು ಮುಕ್ತಾಯವಾಗಲಿದೆ. ಅದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.

ಈ ಮಧ್ಯೆ ಕರ್ನಾಟಕ ರಾಜ್ಯದ  ಮೂರು ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ. ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ಅವರಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರ, ತುಕಾರಂರಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗುವ ಸಾಧ್ಯತೆ ಇದೆ.

Key words: Maharashtra, Jharkhand, Assembly , elections, announce