ಭವಾನಿ ರೇವಣ್ಣಗೆ ರಿಲೀಫ್: ಜಾಮೀನು ರದ್ದಿಗೆ ಸುಪ್ರೀಂಕೋರ್ಟ್ ನಕಾರ

ಬೆಂಗಳೂರು, ಅಕ್ಟೋಬರ್,18,2024 (www.justkannada.in): ಕೆ.ಆರ್ ನಗರ  ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ   ಭವಾನಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದು ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಈ ಮೂಲಕ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.  ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ  ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಬೆನ್ನಲ್ಲೇ ಎಸ್ ಐ ಟಿ ಅಧಿಕಾರಿಗಳು ಭವಾನಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್  ಮೆಟ್ಟಿಲೇರಿದ್ದರು.

ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ಇದೀಗ ಭವಾನಿ ರೇವಣ್ಣ ಅವರಿಗೆ ನೀಡಿರುವ ಜಾಮೀನು ರದ್ದು ಮಾಡಲು ನಿರಾಕರಿಸುವ ಮೂಲಕ ಹೈಕೋರ್ಟ್ ಆದೇಶ ಎತ್ತಿ ಹಿಡಿದಿದೆ.

ರಾಜಕೀಯ ಕುಟುಂಬ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ?  ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು.  ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

Key words: Bhavani Revanna, Supreme Court,  rejects, cancellation, bail