ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ: ಸುಪ್ರೀಂ ಮೆಟ್ಟಿಲೇರಿದ CBI

ಬೆಂಗಳೂರು, ಅಕ್ಟೋಬರ್,21,2024 (www.justkannada.in):  ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು.  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದಿತ್ತು. ಈ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಇದೀಗ ಸಿಬಿಐ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಅರ್ಜಿ ಸಲ್ಲಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

Key words: DCM, DK Shivakumar,  CBI, Supreme Court