ಬೆಂಗಳೂರು, ಅಕ್ಟೋಬರ್,21,2024 (www.justkannada.in): ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ವರುಣ ಅಬ್ಬರಿಸುತ್ತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ನಾಳೆವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಜ್ಞ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಬೆಂಗಳೂರಿನಲ್ಲಿ ನಾಳೆವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರ, ತಮಿಳುಬನಾಡು ಕರಾವಳಿಯಲ್ಲಿ ಗಾಳಿಯ ಪರಿಚಲನೆ ಇದ್ದು. ಅಕ್ಟೋಬರ್ 23ರವರೆಗೂ ಮಳೆ ಬೀಳಲಿದೆ ಎಂದು ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಠಿಯಾಗಿದ್ದು ವಿವಿಧ ಪ್ರದೇಶಗಳಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಸಾಕಷ್ಟ ತೊಂದರೆ ಅನುಭವಿಸಿದ್ದಾರೆ. ಈ ನಡುವೆ ಮಳೆಯಿಂದಾಗಿ ರಸ್ತೆ ಕಾಣದೆ ಬೊಲೆರೂ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲ್ಲೂಕಿನ ಸೀಗೆಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್ ಮೃತಪಟ್ಟ ವ್ಯಕ್ತಿ. ರಸ್ತೆ ಕಾಣದೆ ಬೊಲೆರೂ ವಾಹನಕ್ಕೆ ಶ್ರೀನಿವಾಸ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಶ್ರೀನಿವಾಸ್ ಮೃತಪಟ್ಟಿದ್ದಾರೆ.
Key words: Heavy rain, Bengaluru, till, tomorrow