ಹುಬ್ಬಳ್ಳಿ,ಅಕ್ಟೋಬರ್,21,2024 (www.justkannada.in): ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಟಿಕೆಟ್ ಕೈತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿಅಸಮಾಧಾನಗೊಂಡಿದ್ದ ಸಿ.ಪಿ ಯೋಗೇಶ್ವರ್ ಇದೀಗ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಹುಬ್ಬಳ್ಳಿಗೆ ತೆರಳಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದ ಸಿ.ಪಿ ಯೋಗೇಶ್ವರ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜೀನಾಮೆ ಪತ್ರವನ್ನ ಸಭಾಪತಿ ಹೊರಟ್ಟಿ ಸ್ವೀಕರಿಸಿದ್ದಾರೆ.
ಸಿಪಿ ಯೋಗೇಶ್ವರ್ ವಿಧಾನ ಪರಿಷತ್ ನ ನಾಮನಿರ್ದೇಶಿತ ಸದಸ್ಯರಾಗಿದ್ದರು. ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಮೈತ್ರಿ ಟಿಕೆಟ್ ಗಾಗಿ ಬೇಡಿಕೆಯಿಟ್ಟಿದ್ದರು. ಆದರೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಲು ಸಿಪಿ ಯೋಗೇಶ್ವರ್ ಗೆ ಆಹ್ವಾನಿಸಲಾಗಿತ್ತು. ಆದರೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಲು ಸಿಪಿ ಯೋಗೇಶ್ವರ್ ನಿರಾಕರಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ
ರಾಜೀನಾಮೆ ಬಳಿಕ ಮಾತನಾಡಿದ ಸಿಪಿ ಯೋಗೇಶ್ವರ್, ಪರಿಷತ್ ಸದಸ್ಯ ಸ್ಥಾನಕ್ಕೆಇಂದು ರಾಜೀನಾಮೆ ಸಲ್ಲಿಸಿದ್ದೇನೆ. ನಾನು ಚನ್ನಪಟ್ಟಣ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಚುನಾವಣೆಗೆ ಸ್ಪರ್ಧಿಸಬೇಕಾದರೆ ರಾಜೀನಾಮೆ ನೀಡಬೇಕಾಗುತ್ತದೆ. ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
Key words: CP Yogeshwar, resignation, MLC, hubli