ಬೆಂಗಳೂರು,ಅಕ್ಟೋಬರ್,24,2024 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದರು.
ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತದ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಅಲ್ಲ ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದು ಬಿದ್ದಿದೆ. ಘಟನೆಯಲ್ಲಿ 8 ಜನ ಸಾವನ್ನಪ್ಪಿ 8ಜನರನ್ನ ರಕ್ಷಿಸಲಾಗಿದೆ. ಗಾಯಾಳುಗಳಿಗೆ ಸರ್ಕರದಿಂದ ವೈದ್ಯಕೀಯ ವೆಚ್ಚ ಭರಿಸುತ್ತೇವೆ ಚಿಕಿತ್ಸೆ ಬಳಿಕ ಗಾಯಳುಗಳಿಗೂ ಪರಿಹಾರ ವಿತರಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದರು.
, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು ಅಮಾನತು ಮಾಡಿದರೆ ಸಾಲದು. ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್ ಅವರಿಗೂ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
Key words: CM Siddaramaiah, visits, building, collapse, compensation