ಮೈಸೂರು,ನವೆಂಬರ್,4,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇದೀಗ ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಪ್ರಕರಣದ ಎ1 ಆಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನವೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಲೋಕಾಯುಕ್ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಕರಣ ಸಂಬಂಧ ಈಗಾಗಲೇ ಎ2 ಪಾರ್ವತಿ ಸಿದ್ದರಾಮಯ್ಯ , ಎ3 ಮಲ್ಲಿಕಾರ್ಜುನ್, ಎ4 ದೇವರಾಜು ಸೇರಿ ಹಲವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದು ಹಲವು ಮಾಹಿತಿ ಕಲೆ ಹಾಕಿದ್ದಾರೆ. ಈ ನಡುವೆ ಇದೀಗ ಸಿಎಂ ಸಿದ್ದರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ.
Key words: Lokayukta, notice, CM Siddaramaiah, attend, hearing