ಬೆಂಗಳೂರು,ನವೆಂಬರ್,5,2024 (www.justkannada.in): ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಮುಡಾ ಕೇಸ್ ಸಂಬಂಧ ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿರುವ ವಿಚಾರ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ಸಿಎಂ ಆಗಿ ವಿಚಾರಣೆಗೆ ಹೋಗ್ತಾರೋ ? ಆರೋಪಿಯಾಗಿ ವಿಚಾರಣೆಗೆ ಹಾಜರಾಗುತ್ತಾರೋ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸಿದ್ದ. ಖರ್ಗೆ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಸಿಎಂ ರಾಜೀನಾಮೆಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಯಾವಾಗ ರಾಜೀನಾಮೆ ಅಂತ ಸಿಎಂ ಸಿದ್ದರಾಮಯ್ಯ ಹೇಳಬೇಕು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
Key words: CM Siddaramaiah, resignation, fixed, BY Vijayendra