ಮೈಸೂರು,ನವೆಂಬರ್,6,2024 (www.justkannada.in): ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯರಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಆರಂಭವಾಗಿದ್ದು, ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸಲಿದ್ದಾರೆ.
Key words: CM Siddaramaiah, attended, Lokayukta, hearing