ಮೈಸೂರು,ನವೆಂಬರ್,6,2024 (www.justkannada.in): ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೆ. ಲೋಕಾಯುಕ್ತ ಅಧಿಕಾರಿಗಳು ಕೇಳಿರುವ ಪ್ರಶ್ನೆಗಳಿಗೆ ಎಲ್ಲಾ ರೀತಿಯಲ್ಲಿ ಉತ್ತರಿಸಿದ್ದೇನೆ. ಮತ್ತೆ ವಿಚಾರಣೆಗೆ ಬರುವಂತೆ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮುಡಾ ಹಗರಣ ಸಂಬಂಧ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಎದುರಿಸಿ ಹೊರಬಂದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾನೂನಿನ ಪ್ರಕಾರವೇ ಸೈಟ್ ಪಡೆದಿದ್ದು .ಲೋಕಾಯುಕ್ತ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇನೆ. ನನ್ನ ಉತ್ತರವನ್ನ ಅವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿಲ್ಲ ಎಂದರು.
ಲೋಕಾಯುಕ್ತ ತನಿಖೆ ಬಗ್ಗೆ ಬಿಜೆಪಿ ಟೀಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ತನಿಖೆಯ ವಿರುದ್ದವಾಗಿ ಇದ್ದಾರಾ..? ಬಿಜೆಪಿಯವರು ಯಾವುದಾದರೂ ಕೇಸ್ ಸಿಬಿಐಗೆ ಕೊಟ್ಟಿದ್ದಾರಾ..? ಲೋಕಾಯುಕ್ತ ಪೊಲೀಸ್ ಮಾಡಿದ್ದು ಯಾರು? ಬಿಜೆಪಿ ಜೆಡಿಎಸ್ ಸುಳ್ಳು ಆರೋಪಗಳನ್ನ ಮಾಡಿದ್ದಾರೆ. ಬಿಜೆಪಿಯವರಿಗೆ ಕಾನೂನಿನ ಮೇಲೆ ಗೌರವವಿಲ್ಲ. ಸುಳ್ಳು ಆರೋಪಗಳಿಗೆ ಕೋರ್ಟ್ ನಲ್ಲಿ ಉತ್ತರಿಸುವೆ ಎಂದು ತಿಳಿಸಿದರು.
Key words: mysore, Lokayukta, hearing, CM, Siddaramaiah