ರಾಮನಗರ,ನವೆಂಬರ್,13,2024 (www.justkannada.in): ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ಕ್ಷೇತ್ರಗಳಲ್ಲಿಯೂ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಇಂದು ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಲಿದೆ.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೂರು ಕ್ಷೇತ್ರಗಳಲ್ಲಿಯೂ ಬೆಳಿಗ್ಗೆ 9ಗಂಟೆಯವರೆಗೂ ಉತ್ತಮ ರೀತಿಯಲ್ಲಿ ಮತದಾನವಾಗಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಬೈ ಎಲೆಕ್ಷನ್ ನಡೆಯುತ್ತಿದ್ದು ಕ್ಷೇತ್ರದಲ್ಲಿ ಒಟ್ಟು 2,32,836 ಮತದಾರರದ್ದಾರೆ. ಪುರುಷ ಮತದಾರರು-1,12,271, ಮಹಿಳಾ ಮತದಾರರು-1,20,557, ಇತರೆ ಮತದಾರರಿದ್ದಾರೆ. ಕ್ಷೇತ್ರದ ಒಟ್ಟು ಮತಗಟ್ಟೆಗಳ ಸಂಖ್ಯೆ-276, ನಗರವ್ಯಾಪ್ತಿಯಲ್ಲಿ 62 ಮತಗಟ್ಟೆಗಳಿದ್ದು ಗ್ರಾಮಾಂತರ ಪ್ರದೇಶದಲ್ಲಿ 214 ಮತಗಟ್ಟೆ ಸ್ಥಾಪಿಸಲಾಗಿದೆ. 119 ಕ್ರಿಟಿಕಲ್ ಮತಗಳಟ್ಟೆಗಳ ಗುರುತು ಮಾಡಲಾಗಿದ್ದು, ಎಲ್ಲಾ ಮತಗಟ್ಟೆಗಳಲ್ಲೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಚುನಾವಣಾ ಕಾರ್ಯಕ್ಕೆ 1252 ಮತಗಟ್ಟೆ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು 16 SST ತಂಡ, 9 FST ತಂಡ ಹಾಗೂ 119 ಮೈಕ್ರೋ ವೀಕ್ಷಕರ ನಿಯೋಜನೆ ಮಾಡಲಾಗಿದೆ. ಚುನಾವಣಾ ಭದ್ರತೆಗಾಗಿ 8 ಪ್ಯಾರಾ ಮಿಲಿಟರಿ ಪೋರ್ಸ್ ಬಳಕೆ ಮಾಡಲಾಗಿದ್ದು, 650ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. 197 ಮತಗಟ್ಟೆಗಳಲ್ಲಿ ಪ್ಯಾರಾಮಿಲಿಟರಿ ಪಡೆ ಕಣ್ಗಾವಲು ಇರಿಸಲಾಗಿದೆ.
54 ಕ್ಲಸ್ಟರ್ ಮತಗಟ್ಟೆಗಳಲ್ಲಿ ಎಎಸ್ಐ ರ್ಯಾಂಕ್ ಅಧಿಕಾರಿಗಳು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇನ್ನು ನವೆಂಬರ್ 12 ಸಂಜೆ 6 ಗಂಟೆಯಿಂದ ನವೆಂಬರ್ 14ರ ಬೆಳಿಗ್ಗೆ 6ರವರೆಗೆ ತಾಲೂಕಿನಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ಹಾಗೂ ಸಾಗಾಣಿಕೆಗೆ ನಿಷೇಧ ವಿಧಿಸಲಾಗಿದ್ದು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ. ನೀತಿ ಸಂಹಿತೆ ಉಲ್ಲಂಘನೆ ಮೇಲೆ ಚುನಾವಣಾಧಿಕಾರಿಗಳ ಹದ್ದಿನ ಕಣ್ಣು ಇರಿಸಲಾಗಿದೆ.
ಮೂರು ಕ್ಷೇತ್ರಗಳಲ್ಲೂ ಬಿರುಸಿನ ಮತದಾನ ನಡೆಯುತ್ತಿದ್ದು, ಇಂದೇ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
Key words: By-elections, Channapatna, sandur, shiggavi