BY-ELECTION:  ರಾಜಕೀಯ ನಾಯಕರಿಂದ ಮತದಾನ: ಈವರೆಗಿನ ವೋಟಿಂಗ್ ಪ್ರಮಾಣ ಎಷ್ಟು ಗೊತ್ತೆ..?

 ರಾಮನಗರ ,ನವೆಂಬರ್, 13,2024 (www.justkannada.in):  ರಾಜ್ಯದಲ್ಲಿ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳ ಬಳಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ರಾಜಕೀಯ ನಾಯಕರು ಸಹ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್  ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

ಹಾಗೆಯೇ  ಸಂಡೂರು ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಪತಿ ತುಕಾರಾಂ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.

ಮತದಾನಕ್ಕೂ ಮೊದಲು ಕ್ಷೇತ್ರದ ವಿವಿಧ ದೇವಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಪುತ್ರ ಹಾಗೂ ಶಿಗ್ಗಾವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೇವರಲ್ಲಿ ಪ್ರಾರ್ಥಿಸಿದರು. ವಿಶೇಷ ಪೂಜೆ ನೆರವೇರಿಸಿ, ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಈವರೆಗೆ ಆದ ಮತದಾನದ ಪ್ರಮಾಣ

ಮೂರು ಕ್ಷೇತ್ರಗಳಲ್ಲಿ11 ಗಂಟೆ ವೇಳೆಗೆ ಶೇ.26.33 ರಷ್ಟು ಮತದಾನವಾಗಿದೆ.  ಶಿಗ್ಗಾವಿ ಕ್ಷೇತ್ರದಲ್ಲಿ 11 ಗಂಟೆ ವೇಳೆಗೆ ಶೇ 26.01 ರಷ್ಟು, ಚನ್ನಪಟ್ಟಣ ಕ್ಷೇತ್ರದಲ್ಲಿ ಶೇ 27.06ರಷ್ಟು,  ಸಂಡೂರು ಕ್ಷೇತ್ರದಲ್ಲಿ ಶೇ 26 ರಷ್ಟು ಮತದಾನವಾಗಿದೆ.

Key words: By-election, Voting, political leaders