ಬೆಂಗಳೂರು, ನವೆಂಬರ್ ,13,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ನಟ ದರ್ಶನ್ ಗೆ ಈಗಾಗಲೇ ಮಂಜೂರಾಗಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವಲ್ಲಿ ವಿಳಂಬ ಆಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನಿಸುತ್ತಾರೆ. ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಸೂಚಿಸಿದ್ದೇನೆ. ಇಂಥ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ. ಮೇಲ್ಮನವಿ ಸಲ್ಲಿಕೆ ವಿಚಾರವಾಗಿ ಪೊಲೀಸ್ ಇಲಾಖೆಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಬಳಿಕ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 2ನೇ ಆರೋಪಿ ನಟ ದರ್ಶನ್ ಗೆ ಬೆನ್ನುನೋವು ಹಿನ್ನೆಲೆ, ಚಿಕಿತ್ಸೆಗಾಗಿ 6 ವಾರಗಳ ಕಾಲ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Key words: no delay, appeal, Darshan, interim bail, Minister, Parameshwar