ಬೆಂಗಳೂರು,ನವೆಂಬರ್,15,2024 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುವ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅರುಣ್ ಕುಮಾರ್ ಜಿ.ವಿ ಲೋಕಾಯುಕ್ತ ಬಲೆಗೆ ಬಿದ್ದ ಬಿಎಂಟಿಎಫ್ ಪೊಲೀಸ್ ಇನ್ಸ್ ಪೆಕ್ಟರ್. ಶ್ರೀದೇವಿ ಎಂಬುವವರ ಕೇಸ್ ಕ್ಲೋಸ್ ಮಾಡಲು ಪೊಲೀಸ್ ಇನ್ಸ್ ಪೆಕ್ಟರ್ ಅರುಣ್ ಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಕುರಿತು ಕಾಡುಗೋಡಿ ನಿವಾಸಿ ಪರಮೇಶ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಥಣಿಸಂದ್ರದ ಬಳಿ ಇನ್ಸ್ ಪೆಕ್ಟರ್ ಸ್ನೇಹಿತ ನಂದೀಶ್ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 2 ಲಕ್ಷ ರೂ . ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ.
Key words: Police Inspector, Lokayukta, trap