ಸುಳ್ಳು ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ- ಪ್ರಧಾನಿ ಮೋದಿಗೆ ಮತ್ತೆ ಸವಾಲೆಸದ ಸಿಎಂ ಸಿದ್ದರಾಮಯ್ಯ

ಮಂಗಳ್ ವೇಡ,ನವೆಂಬರ್,16,2024 (www.justkannada.in): ಪ್ರಧಾನಿ ಮೋದಿ ಅವರು ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ. ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿ.ಎಂ ಸಿದ್ದರಾಮಯ್ಯ ಮತ್ತೊಮ್ಮೆ ಸವಾಲು ಹಾಕಿದರು.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್  ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಎಂದು ಕರೆ ನೀಡಿದರು. ಪಂಡರಪುರ ಮಂಗಲ್ ವೇಡ ಪಾಂಡುರಂಗ, ವಿಠ್ಠಲ ಭಗವಾನ್ ಅವರ ಮೌಲ್ಯಗಳನ್ನು ಆಚರಿಸುವ ಅತ್ಯಂತ ಪವಿತ್ರವಾದ ಸ್ಥಳ ಎಂದರು.

ಶರಣ ಬಸವೇಶ್ವರರು 14 ವರ್ಷ ಮಂತ್ರಿಯಾಗಿದ್ದ ಸ್ಥಳ ಪಂಡರಪುರ ಮಂಗಳ್ ವೇಡಾ.  ಜಾತಿ ತಾರತಮ್ಯ ಹೋಗಲಾಡಿಸಲು, ಮನುಷ್ಯ ತಾರತಮ್ಯ ನಿವಾರಿಸಲು ಬಸವೇಶ್ವರರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂಥಾ ಪವಿತ್ರವಾದ ಸ್ಥಳದಲ್ಲಿ ಬಿಜೆಪಿ ಗೆಲ್ಲಬಾರದು ಎಂದರು.

ಜವಾಹರಲಾಲ್ ನೆಹರು ಅವರಿಂದ ಮನ‌ಮೋಹನ್ ಸಿಂಗ್ ಅವರ ವರೆಗೂ ಕಾಂಗ್ರೆಸ್ಸಿನ ಎಲ್ಲಾ ಪ್ರಧಾನಿಗಳು ಅಂಬೇಡ್ಕರ್ ಅವರ ಆಶಯಕ್ಕೆ ತಕ್ಕಂತೆ ಸಾಮಾಜಿಕ ನ್ಯಾಯದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ ಬಹುತ್ವದ ಚರಿತ್ರೆ ಹೊಂದಿದ್ದಾರೆ ಎಂದರು.‌

ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುತ್ತಾ ಬಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಶ್ರೀಮಂತ ಮತ್ತು ಮೇಲ್ವರ್ಗದವರ ಪಕ್ಷವಾಗಿದ್ದು ಈ ಕಾರಣಕ್ಕೇ ಬಿಜೆಪಿ ಬಡವರ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಹೆಚ್ಚಿಸುತ್ತಿದೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಕೇವಲ ಅಂಬಾನಿ ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡಿದರೇ ಹೊರತು ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಕ್ರಮವನ್ನೂ ರೂಪಿಸಲಿಲ್ಲ. ನಿಮ್ಮ ಮನೆ ಬಾಗಿಲಿಗೆ ತರಲಿಲ್ಲ. ಬದಲಿಗೆ ಪೆಟ್ರೋಲ್, ಡೀಸೆಲ್, ಗ್ಯಾಸ್, ಕಾಳು, ಬೇಳೆ ಎಲ್ಲದರ ಬೆಲೆ ಏರಿಸಿದರು. ಅಚ್ಛೇ ದಿನ್ ಆಯೆಗಾ ಎಂದರು. ಕಹಾಂ ಹೈ ಅಚ್ಛೆ ದಿನ್ ? ಬೆಲೆ ಏರಿಕೆಗೆ ಬ್ರೇಕ್ ಹಾಕುವುದಾಗಿ ಭಾಷಣ ಮಾಡಿದರು. ಆದರೆ ಬೆಲೆ ಏರಿಕೆ ಮುಗಿಲು ಮುಟ್ಟಿದೆ ಎಂದು ಟೀಕಿಸಿದರು.

ಭಾರತದ ರೈತರು ಸಾಲ ಮನ್ನಾ ಮಾಡಿ ಎಂದು ಮೋದಿಯವರಿಗೆ ಕೇಳಿದರೆ, ಈ ಮೋದಿ ಅವರು ರೈತರ ಒಂದೇ ಒಂದು ರೂಪಾಯಿ ಸಾಲ ಮನ್ನಾ ಮಾಡಲಿಲ್ಲ. ಬದಲಿಗೆ ಕಾರ್ಪೋರೇಟ್ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಭಾರತದ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು. ನಾನು ಮೊದಲ ಬಾರಿ ಕರ್ನಾಟಕದ ಮುಖ್ಯಮಂತ್ರಿ ಆದಾಗ ರೈತರ ಸಾಲ ಮನ್ನಾ ಮಾಡಿದೆ. ಬಿಜೆಪಿಯವರಿಗೆ ರೈತರ ಸಾಲ ಮನ್ನಾ ಮಾಡಿ ಎಂದರೆ, ನಮ್ಮ ಬಳಿ ನೋಟು ಪ್ರಿಂಟ್ ಹಾಕುವ ಯಂತ್ರ ಇಲ್ಲ ಅಂದರು. ಹೌದು ಬಿಜೆಪಿಯವರ ಮನೆಯಲ್ಲಿ ಇರುವುದು ನೋಟು ಎಣಿಸುವ ಯಂತ್ರ ಮಾತ್ರ ಎಂದು ವ್ಯಂಗ್ಯವಾಡಿದರು.

ಮಹಾರಾಷ್ಟ್ರದಲ್ಲಿ ಮೋದಿಗೆ ಮತ್ತೊಮ್ಮೆ ಸವಾಲೆಸೆದ ಸಿದ್ದರಾಮಯ್ಯ

ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಮುಂದೆಯೂ ಬರೋದಿಲ್ಲ.  ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ಮೋದಿಯವರೇ ನಾನು ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಿಮಗೆ ನೇರ ಸವಾಲು ಹಾಕುತ್ತಿದ್ದೇನೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ದ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ ಎಂದು ಸವಾಲು ಹಾಕಿದರು.

ನಿಮಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ಇದ್ದರೆ ನನ್ನ ಸವಾಲನ್ನು ಸ್ವೀಕರಿಸಿ ಎಂದು ಮೋದಿಯವರಿಗೆ ಕರೆ ನೀಡಿದರು.

ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಶಾಸಕರನ್ನು ಖರೀದಿಸಿದರಲ್ಲಾ ಅದಕ್ಕೆಲ್ಲಾ ಅಷ್ಟು ಕೋಟಿ ಕೋಟಿ ಹಣ ಎಲ್ಲಿಂದ ಬಂತು ನಿಮಗೆ? ಮಹಾರಾಷ್ಟ್ರ ಜನತೆಗೆ ಉತ್ತರಿಸಿ ಎಂದು ಮತ್ತೊಂದು ಸವಾಲು ಎಸೆದರು.

ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ  ಅಧಿಕಾರಕ್ಕೆ ಬಂದರು. ಈ ಆಪರೇಷನ್ ಗೆ ಬಳಸಿದ ಹಣ ಯಾವುದು? ಭ್ರಷ್ಟಾಚಾರದ್ದು ಅಲ್ವಾ? ಆ ಹಣ ಎಲ್ಲಿಂದ ಬಂತು ಎಂದು ಮಹಾರಾಷ್ಟ್ರ ಜನರಿಗೆ ಹೇಳಬಲ್ಲಿರಾ ಎಂದು ಪ್ರಶ್ನಿಸಿದರು.

ಕರ್ನಾಟಕ ಜನ ತಿರಸ್ಕರಿಸಿದರು- ಮಹಾರಾಷ್ಟ್ರ ಜನರ ಸರದಿ ಈಗ: ಸೆಡ್ಡು ಹೊಡೆದು ತೋರಿಸಿ

ಆಪರೇಷನ್ ಕಮಲದ ಬಿಜೆಪಿಯ ಹೊಲಸು ಸಂಸ್ಕಾರವನ್ನು ಕರ್ನಾಟಕ ಜನತೆ ತಿರಸ್ಕರಿಸಿದ್ದಾರೆ. ಈಗ ಮಹಾರಾಷ್ಟ್ರ ಜನತೆಯ ಸರದಿ. ನೀವೂ ಆಪರೇಷನ್ ಕಮಲದ ಸಂಸ್ಕಾರವನ್ನು ತಿರಸ್ಕರಿಸಿ ಸೆಡ್ಡು ಹೊಡೆಯಿರಿ ಎಂದು ಕರೆ ನೀಡಿದರು.

ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ: ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡ್ತೀನಿ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ ಆಗದೆ ಕಾಂಗ್ರೆಸ್ ಕರ್ನಾಟಕ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಸುಳ್ಳು ಜಾಹೀರಾತು ನೀಡಿದೆ.  ಇವರಿಗೆ ನಾಚಿಕೆ ಇಲ್ಲ.  ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡ್ತೀನಿ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹೀರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ ಎಂದು ಸವಾಲು ಹಾಕಿದರು.

ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನನ್ನ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ. ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದರು.

ಮಹಾ ವಿಕಾಸ್ ಆಘಾಡಿ ಮಾತ್ರ ಕೊಟ್ಟ ಭರವಸೆಗಳನ್ನು ಈಡೇರಿಸಿ ಮಹಾರಾಷ್ಟ್ರ ಜನರ ಬದುಕಿಗೆ ಆರ್ಥಿಕ ಶಕ್ತಿ ನೀಡುತ್ತದೆ. ಆದ್ದರಿಂದ ಬಿಜೆಪಿ ಸೋಲಿಸಿ ಆರ್ಥಿಕ ಶಕ್ತಿ ಪಡೆಯಿರಿ ಎಂದು ಕರೆ ನೀಡಿದರು.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಸಂಸದೆ ಪ್ರಣತಿ ಶಿಂಧೆ, ಸಚಿವರಾದ ಎಂ.ಪಿ.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ

ಮಹಾರಾಷ್ಟ್ರದ ನಾನಾ ಕಡೆ ಚುನಾವಣಾ ಪ್ರಚಾರ ಪೂರೈಸಿದ ಸೋಲಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.  ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಿಷ್ಟು…

ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ.

ಶಕ್ತಿ ಯೋಜನೆ: ಇಲ್ಲಿಯವರೆಗೂ ಈ ಗ್ಯಾರಂಟಿಯಿಂದ 325 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ

ಗೃಹಜ್ಯೋತಿ : ಒಂದು ಕೋಟಿ 62 ಸಾವಿರ  ಕುಟುಂಬಗಳು 200 ಯೂನಿಟ್ ವರೆಗೆ  ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ

ಅನ್ನಭಾಗ್ಯ : ಒಂದು ಕೋಟಿ 20 ಸಾವಿರ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು 170 ರೂಪಾಯಿಗಳನ್ನು ತಲಾ ಪಡೆಯುತ್ತಿದ್ದಾರೆ.

ಗೃಹಲಕ್ಷ್ಮಿ: ಒಂದು ಕೋಟಿ 22 ಲಕ್ಷ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2000 ರೂಪಾಯಿ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಹೆಚ್ಚೂ ಕಡಿಮೆ ಈ ಗ್ಯಾರಂಟಿಯಿಂದ ಪ್ರತೀ ತಿಂಗಳು 30 ಸಾವಿರ ಕೋಟಿ ರೂಪಾಯಿ ಹಣ ಮನೆ ಯಜಮಾನಿಯರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ

ಯುವನಿಧಿ: ಸರ್ಕಾರ ಬಂದ 8 ತಿಂಗಳೊಳಗೆ ಇದೂ ಸೇರಿ ಎಲ್ಲಾ ಐದು ಗ್ಯಾರಂಟಿಗಳು ಆರಂಭವಾಗಿದ್ದು ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲಮೋ ಹೊಂದಿರುವವರು ಯುವನಿಧಿ ಅಡಿಯಲ್ಲಿ ಭತ್ಯೆ ಪಡೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಮಹಾರಾಷ್ಟ್ರ ಬಿಜೆಪಿ ಮುಖಂಡರು ಮತ್ತು ಬಿಜೆಪಿಯ ಮಂತ್ರಿಗಳು ಕರ್ನಾಟಕಕ್ಕೆ ಬಂದು ಪರೀಕ್ಷಿಸಲಿ. ಸುಳ್ಳಾದ್ರೆ ನಾನು ರಾಜಕೀಯ ನಿವೃತ್ತಿ ತಗೊತೀನಿ. ನಿಜ ಆಗಿದ್ರೆ ನೀವು ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿ ರಾಜಕೀಯ ನಿವೃತ್ತಿ ಘೋಷಿಸ್ತೀರಾ? ಎಂದು ಸವಾಲು ಹಾಕಿದರು.

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರದ ವಿರುದ್ಧ ಪುಟಗಟ್ಟಲೆ ಸುಳ್ಳು ಜಾಹೀರಾತು ನೀಡಿರುವ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ದೇವೆ ಎಂದರು.

ಕರ್ನಾಟಕ ಪ್ರತೀ ವರ್ಷ 4 ಲಕ್ಷ 50 ಸಾವಿರ ಕೋಟಿಯಷ್ಟು ತೆರಿಗೆಯನ್ನು ಕೇಂದ್ರಕ್ಕೆ ಪಾವತಿಸಿದರೆ ವಾಪಾಸ್ ರಾಜ್ಯಕ್ಕೆ ಬರುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಮಾತ್ರ

ಮಹಾರಾಷ್ಟ್ರ ರಾಜ್ಯ ಪ್ರತೀ ವರ್ಷ 8 ಲಕ್ಷ 78 ಸಾವಿರ ಕೋಟಿ ರೂಪಾಯಿ ತೆರಿಗೆ ಕಟ್ಟಿದರೆ ವಾಪಾಸ್ ಬರುತ್ತಿರುವುದು 1 ಲಕ್ಷ 30 ಸಾವಿರ ಕೋಟಿ ಮಾತ್ರ. ಹೀಗಾಗಿ ಮಹಾರಾಷ್ಟ್ರ ಕಟ್ಟುವ ಪ್ರತೀ  ಒಂದು ರೂಪಾಯಿ ತೆರಿಗೆಯಲ್ಲಿ 15 ಪೈಸೆಯಷ್ಟನ್ನು, ಕರ್ನಾಟಕ 13 ಪೈಸೆಯಷ್ಟನ್ನು ಮಾತ್ರ ವಾಪಾಸ್ ಪಡೆಯುತ್ತಿದೆ.

ಕೇಂದ್ರದ ಮೋದಿ ಸರ್ಕಾರ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೂ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿಗಳ ಜಾರಿಯಿಂದ  ಆರ್ಥಿಕತೆ ನಾಶವಾಗುತ್ತದೆ ಎಂದು ಮೋದಿ ಭಾಷಣ ಮಾಡಿದ್ದಾರೆ. ಆದರೆ, ಇದೇ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಧ್ಯಪ್ರದೇಶ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿತ್ತು.  ಮೋದಿ ಯಾಕೆ ಈ ಮಟ್ಟದ ಸುಳ್ಳು ಹೇಳುತ್ತಾರೆ? ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರೂ ನಮ್ಮ ಗ್ಯಾರಂಟಿಗಳ ಅನುಕೂಲ ಪಡೆಯುತ್ತಿದ್ದಾರೆ ಎಂದರು.

ಮಹಾರಾಷ್ಟ್ರ ಸರ್ಕಾರ ಸಾಮಾಜಿಕವಾಗಿ, ಆರ್ಥಿಕವಾಗಿ ದೊಡ್ಡ ರಾಜ್ಯ. ಆದ್ದರಿಂದ ಇಲ್ಲಿ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಎಲ್ಲಾ  ಗ್ಯಾರಂಟಿಗಳನ್ನು ಜಾರಿ ಮಾಡುತ್ತಾರೆ. ಅನುಮಾನ ಬೇಡ ಎಂದರು.

ENGLISH SUMMARY…

Congress is the only party that believes in and upholds pluralism: CM Siddaramaiah

Siddaramaiah challenges PM Modi once again in Maharashtra

“Prove your false claims in your speeches, or else accept political retirement.”

Case to be filed against Maharashtra BJP for false advertisements given to newspapers: CM announces Karnataka government’s decision.

Mangalwedha (Maharashtra) –
“Congress is the only party that believes in and upholds pluralism. To preserve and promote this culture of pluralism, all of you must come together in this political movement and work towards ensuring Congress’s victory,” urged Chief Minister Siddaramaiah.

He was addressing a large crowd at a public meeting organised by the Maharashtra State Congress in Mangalwedha, Solapur district.

CM Siddaramaiah also highlighted that Pandharpur Mangalwedha is a sacred place, where the values of Lord Panduranga and Vithal Bhagwan are deeply revered.

Pandharpur Mangalwedha: The Sacred Place Where Sharana Basaveshwara Served as Minister for 14 Years

Sharana Basaveshwara founded the Lingayat faith to eliminate caste discrimination and promote equality. CM Siddaramaiah emphasised that such a sacred place should not witness BJP’s victory.

He also noted that every Congress Prime Minister, from Jawaharlal Nehru to Manmohan Singh, has followed Dr. Ambedkar’s vision by implementing policies that promote social justice, creating a legacy of pluralism.

CM Siddaramaiah further criticised the BJP for being the party of the rich and upper castes, which has only widened the gap between the rich and the poor. In contrast, Congress has always worked to bridge that divide.

Prime Minister Narendra Modi has focused solely on increasing the wealth of Ambani and Adani, doing nothing to improve the lives of the poor, farmers, workers, and labourers. He hasn’t brought any relief to your doorsteps. Instead, prices of petrol, diesel, gas, pulses, and other essentials have soared.

He promised “Ache Din” (good days), but where are they? He claimed he would curb price hikes, yet the prices have reached unbearable levels.

When Indian farmers requested loan waivers, Modi did nothing. In contrast, he wrote off ₹16 lakh crore in corporate debt. Meanwhile, Congress Prime Minister Manmohan Singh waived ₹76,000 crore of farmers’ loans. When I first became Chief Minister of Karnataka, I waived farmers’ loans. But when the BJP was asked to do the same, they said, “We don’t have a machine to print money.” Yes, all the BJP has is a machine to count money, not to help the farmers, he remarked sarcastically.

Siddaramaiah Challenges Modi Once Again in Maharashtra

“In post-independence India, no Prime Minister has ever told as many lies as Modi, and none will ever do so in the future,” stated Chief Minister Siddaramaiah.

He called out Modi for falsely claiming that the Congress party was running the Maharashtra elections with ₹700 crore in bribes from the Karnataka Excise Department. “Modi himself made this baseless accusation here in Maharashtra. I challenge you directly in this very state. If you can prove your false claims, I am ready to retire from politics immediately. If not, will you announce your own political retirement?” Siddaramaiah challenged.

He further criticised Modi, saying, “You have no moral authority to speak about corruption. If you do, accept my challenge.”

Siddaramaiah also posed another question: “Where did all the money come from to buy legislators through ‘Operation Kamala’ in various states? Answer the people of Maharashtra,” he demanded, intensifying his challenge to the Prime Minister.

Eknath Shinde did not come to power through the blessings of the people of Maharashtra. He seized power through ‘Operation Kamala’. What is the source of the money used in this operation? Isn’t this corruption? Can you explain to the people of Maharashtra where that money came from?” Siddaramaiah questioned.

Siddaramaiah’s Appeal to the People of Maharashtra

“The people of Karnataka have already rejected the BJP’s ‘Operation Kamala’ tactics. Now, it’s the turn of the people of Maharashtra. Stand against the corrupt practices of ‘Operation Kamala’ and show your resistance,” Siddaramaiah urged.

Siddaramaiah Challenges Modi and the BJP on False Claims

“The BJP’s Modi and their architects of misinformation need to come to Karnataka and see the truth for themselves. I’ll personally arrange a special flight for you,” Siddaramaiah said, responding to the false advertisements by the Maharashtra BJP accusing the Congress of failing to implement guarantee schemes in Karnataka. “There’s no shame in their statements.”

Siddaramaiah challenged the BJP, stating, “If you really believe the guarantee schemes haven’t been implemented in Karnataka, I’ll resign. But the truth is, these schemes are in place, and the BJP must retract their false claims and apologise to the people of Maharashtra.”

He also highlighted, “Every year, ₹56,000 crore is directly deposited into the accounts of millions of people in Karnataka through these guarantee schemes.”

Siddaramaiah pointed out that the Congress and the Maha Vikas Aghadi have made similar guarantee promises in Maharashtra. “When the Maha Vikas Aghadi comes to power, it will fulfil these commitments. That’s the Congress’s history – to deliver on promises.”

He called on the people of Maharashtra, “Defeat the BJP to secure the economic strength that the Maha Vikas Aghadi will bring to your lives.”

The rally saw the presence of former Maharashtra Chief Minister Sushil Kumar Shinde, MP Praniti Shinde, Minister M B Patil, and several other leaders.

CM Siddaramaiah Announces Yatri Nivas at Mahalingaraya Temple, Mangalwedha

In a major development for the devotees of Mangalwedha’s Mahalingaraya Temple, CM Siddaramaiah assured the construction of a Yatri Nivas (pilgrim rest house) to provide accommodation and facilities for the thousands of devotees visiting the sacred site.

CM Siddaramaiah Vows Legal Action Against Maharashtra BJP for False Claims

Reacting to the BJP’s false accusations that the Karnataka Government has failed to implement its guarantee schemes, CM Siddaramaiah declared that the Karnataka Government would take legal action against the BJP for spreading misleading advertisements. “We will ensure they face the consequences of their false claims,” he stated.

Key words: CM, Siddaramaiah, challenges, PM Modi, Maharashtra