ಬೆಂಗಳೂರು,ನವೆಂಬರ್,20,2024 (www.justkannada.in): ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಿಪಿಎಲ್ ಕಾರ್ಡ್ ಗಳ ಪರಿಶೀಲನೆ ಮಾಡಲಾಗುತ್ತಿದೆ. ಯಾರಿಗೂ ಆತಂಕ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಪಿಎಲ್ ಕಾರ್ಡ್ ರದ್ದು ಬಗ್ಗೆ ಯಾರೂ ಆತಂಕ ಪಡೋದು ಬೇಡ. ಯಾರೆಲ್ಲಾ ಬಡವರಿದ್ದಾರೆ ಅವರಿಗೆ ಬಿಪಿಎಲ್ ಕಾರ್ಡ್ ಸಿಗುತ್ತೆ. ಕೇಂದ್ರ ಸರ್ಕಾರದ ನಿಯಮದಂತೆ ಕಾರ್ಡ್ ರದ್ದು ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಶೀಲನೆ ಮಾಡಲಾಗುತ್ತದೆ ಪರಿಶೀಲನೆ ವೇಳೆ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು ಎಂದರು.
ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಸಿಎಂ ದೆಹಲಿ ಭೇಟಿ ಮೊದಲೇ ನಿಗದಿಯಾಗಿತ್ತು. ನಂದಿನಿ ಹಾಲು ಮಾರ್ಕೆಟ್ ಮಾಡೋಕೆ ಹೋಗುತ್ತಿದ್ದಾರೆ. ನಂದಿನಿ ಹಾಲು ಜಾಸ್ತಿ ಮಾರ್ಕೆಟ್ ಆದರೆ ರೈತರಿಗೆ ಅನುಕೂಲ . ಹೀಗಾಗಿ ದೆಹಲಿಗೆ ಹೋಗುತ್ತಿದ್ದಾರೆ. ಸಿಎಂ ದೆಹಲಿ ಭೇಟಿಯಲ್ಲಿ ಯಾವುದೇ ರಾಜಕೀಯವಿಲ್ಲ ಎಂದರು.
Key words: BPL cards, verified, Central, government guidelines, DCM DK Shivakumar