ಮೈಸೂರು,ನವೆಂಬರ್,21,2024 (www.justkannada.in): ಪೌರಕಾರ್ಮಿಕರಿಗೆ ಸೂರು ಕಲ್ಪಿಸಬೇಕು ಮತ್ತು ಅವರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲು ಮುಂದಾಗಬೇಕು ಎಂದು ಡಿ.ಆರ್ ರಾಜು ಮನವಿ ಮಾಡಿದರು.
ಹೂಟಗಳ್ಳಿ ಪೌರಾಡಳಿತ ನಿರ್ದೇಶನಾಲಯ ನಗರಸಭೆ ಕಾರ್ಯಾಲಯದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಪೌರಕಾರ್ಮಿಕರ ಕುಂದು ಕೊರತೆಗಳ ಸಭೆಯನ್ನು ಏರ್ಪಡಿಸಲಾಗಿತ್ತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿ.ಆರ್ ರಾಜು ಅವರು, ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ ಕೆಲಸವೇನು? ಅವರಿಗೆ ಲಭ್ಯವಿರುವ ಸೌಲಭ್ಯಗಳೇನು? ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಪೌರಕಾರ್ಮಿಕರಿಗಾಗಿ ಸೂರು ಕಲ್ಪಿಸುವ ನಿಟ್ಟಿನಲ್ಲಿ ಪಟ್ಟಿ ಮಾಡಿ , ಸರ್ಕಾರಕ್ಕೆ ಒಂದು ಅರ್ಜಿಸಲ್ಲಿಸಿ ಮನವಿ ಮಾಡಬೇಕು ಎಂದು ಅಧಿಕಾರಿಗೆ ತಿಳಿಸಿದರು.
ಪೌರಕಾರ್ಮಿಕರ ಮಕ್ಕಳಿಗೆ ವಿಶೇಷ ಅನುದಾನದ ಅಡಿಯಲ್ಲಿ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಲ್ಯಾಪ್‌ಟಾಪ್ ನೀಡಲು ಮುಂದಾಗಬೇಕು. ಪೌರಕಾರ್ಮಿಕರರು ಎಲ್ಲಾ ಕುಂದುಕೊರತೆಗಳ ಸಭೆಗಳಲ್ಲಿ ಭಾಗವಹಿಸಬೇಕು. ಕೆಲಸಕ್ಕೆ ಗೈರಾಗುವುದನ್ನು ಕಡಿಮೆ ಮಾಡಿ ಎಂದು ಕಿವಿಮಾತು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಶೇಖರ್ ಅವರು ವಹಿಸಿದ್ದರು. ಇದೇ ವೇಳೆ ಚಿನ್ನಪ್ಪ, ಗಿರಿಜಾ, ರಂಗಸ್ವಾಮಿ , ಶಂಕರ್ ಲಿಂಗೇಗೌಡ, ಕೃಷ್ಣ ಸೇರಿದಂತೆ ಇನ್ನಿತರ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
Key words: mysire, civic workers, Problems, appeal