ಮೈಸೂರು, ನವೆಂಬರ್,23,2024 (www.justkannada.in): ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಬಿಜೆಪಿ ಶಾಸಕ ಶ್ರೀವತ್ಸ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಶಾಸಕ ಶ್ರೀವತ್ಸ, ಈ ಮಟ್ಟಕ್ಕೆ ಮುಖಭಂಗ ಆಗುತ್ತೆ ಎಂದು ನಿರೀಕ್ಷೆ ಮಾಡಿರಲಿಲ್ಲ. ನಾವು ಎರಡು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ನಿರೀಕ್ಷೆ ಇತ್ತು. ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಹಗರಣಗಳು, ಜನ ವಿರೋಧಿ ಅಲೆ ನಡುವೆ ಗೆಲುವು ಸಾಧಿಸಿದೆ ಎಂದರೇ ಅಶ್ಷರ್ಯ. ನಾವೆಲ್ಲಿ ಎಡವಿದ್ದೀವಿ ಎಂದು ಅವಲೋಕನ ಮಾಡಿಕೊಳ್ಳಬೇಕಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಪರಿಣಾಮ ಬೀರಿರಬಹುದು. ಮುಂದೆ ಉಳಿದ ಮೂರುವರೆ ವರ್ಷಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡಬೇಕಿದೆ. ಸಹಜವಾಗಿ ಈ ಗೆಲುವು ಸರ್ಕಾರದ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದರು.
ನಾಳೆ ನಮ್ಮ ರಾಜ್ಯಾಧ್ಯಕ್ಷರು ಸಭೆ ಕರೆದಿದ್ದಾರೆ. ನೋಡೋಣ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಗೆಲುವಿಗೆ ಹೇಗೆ ಸಿದ್ದತೆ, ಪಕ್ಷ ಸಂಘಟನೆ ಮಾಡಬೇಕಿದೆ ಎಂದು. ಭಿನ್ನಾಭಿಪ್ರಾಯ, ಬಣ ರಾಜಕೀಯ ಎಲ್ಲವನ್ನ ಬಿಟ್ಟು ನಾವು ಒಂದಾಗಿ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ ಎಂದು ಶ್ರೀವತ್ಸ ತಿಳಿಸಿದರು.
Key words: Alliance, defeat, by-election, MLA, Srivatsa