ಸಂಸತ್ ನ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ,ನವೆಂಬರ್,27,2024 (www.justkannada.in): ಸಂಸತ್ ನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಈ ನಡುವೆ ಗೌತಮ್ ಅದಾನಿ ಲಂಚ ವಿವಾದ ಸೇರಿ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ  ವಿರೋಧ ಪಕ್ಷದ ಸದಸ್ಯರು ಧರಣಿ ನಡೆಸಿ ಕೋಲಾಹಲ ಸೃಷ್ಠಿಸಿದ  ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನ ನಾಳೆಗೆ ಮುಂದೂಡಲಾಯಿತು.

ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ  ಮುಂದಾದರು. ಹೀಗಾಗಿ ಲೋಕಸಭೆಯ ಕಲಾಪವನ್ನು ನಾಳೆವರೆಗೆ ಮುಂದೂಡಲಾಯಿತು. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಕೆಲವು ಸದಸ್ಯರು ಬಾವಿಗಿಳಿದರೆ ಇತರ ವಿರೋಧ ಪಕ್ಷದ ಸದಸ್ಯರು ಹಜಾರದಲ್ಲಿ ನಿಂತು ಘೋಷಣೆಗಳನ್ನು ಕೂಗಿದರು.

ಅದಾನಿ ವಿವಾದ ಮತ್ತು ಸಂಭಾಲ್‌ನಲ್ಲಿ ಇತ್ತೀಚಿನ ಹಿಂಸಾಚಾರದ ಬಗ್ಗೆ ಚರ್ಚಿಸಲು ಬಯಸಿದ ಪ್ರತಿಪಕ್ಷದ ಸದಸ್ಯರನ್ನ  ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡುವಂತೆ ಕೇಳಿದರು. ಆದರೆ, ಪ್ರತಿಪಕ್ಷಗಳು  ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಸುಮಾರು ಆರು ನಿಮಿಷಗಳ ಕಾಲ ನಡೆದ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ನಂತರ ಪ್ರತಿಭಟನೆ ಹೆಚ್ಚಾದ ಹಿನ್ನೆಲೆಯಲ್ಲಿ ಕಲಾಪವನ್ನ ನಾಳೆಗೆ ಮುಂದೂಡಿದರು.

ಅದಾನಿ ಗ್ರೂಪ್‌ ಗೆ ಸಂಬಂಧಿಸಿದ ಲಂಚ ಆರೋಪ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಸಭಾಪತಿ ಜಗದೀಪ್ ಧನ್ ಕರ್ ಅವರು ನಾಳೆಗೆ ಮುಂದೂಡಿದರು.

Key words: session, Lok Sabha, Rajya Sabha, adjourned