ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ಪೊಲೀಸರಿಂದ ನೋಟಿಸ್

ಬೆಂಗಳೂರು, ನವೆಂಬರ್,29,2024 (www.justkannada.in): ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಉಪ್ಪಾರಪೇಟೆ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.

ಡಿಸೆಂಬರ್ 2 ರಂದು ಬೆಳಿಗ್ಗೆ11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ಉಪ್ಪಾರಪೇಟೆ ಠಾಣಾ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಕ್ಫ್ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚಂದ್ರಶೇಖರ ಸ್ವಾಮೀಜಿ ಮುಸ್ಲಿಮರಿಗೆ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.  ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ  ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Key words: Police, notice, Chandrashekarnath Swamiji