ಚುಂಚನಕಟ್ಟೆ ಧನುಷ್ಕೋಟಿ ಜಲಪಾತೋತ್ಸವ ಉದ್ಘಾಟನೆ

Mysore k.r.nagara Dhanush Koti jalapathosthsava inaugurated by dr.h.c.mahadevappa

 

ಮೈಸೂರು, ಡಿ. ೦೧,೨೦೨೪ :  ನಮ್ಮ ನಾಡು ನುಡಿ, ಜನರ ಆಚಾರ ವಿಚಾರ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂತಹ ಉತ್ಸವಗಳನ್ನು ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋಧ್ಯಮ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಚುಂಚನಕಟ್ಟೆ ಜಲಪಾತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.

2016 ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಗಳು ಆಗಿದ್ದರು. ಅವರಿಗೆ ಕೆ ಆರ್ ನಗರ ಕ್ಷೇತ್ರದ ಮೇಲೆ ಹೆಚ್ಚು ಪ್ರೀತಿ. ಇಲ್ಲಿನ ಶ್ರೀರಾಮ ಸಕ್ಕರೆ ಕಾರ್ಖಾನೆ ಯನ್ನು ಖಾಸಗಿ ಅವರಿಗೆ ವಹಿಸಿ ಉತ್ತಮವಾಗಿ ನಡೆಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದರು.

ಜನರ ನಡೆ ನುಡಿ ಆಚಾರ ವಿಚಾರ ಆಚರಣೆಗಳನ್ನು ಸಂಸ್ಕೃತಿ ಎಂದು ಕರೆಯಲಾಗುತ್ತದೆ. ಇಂತಹ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಉತ್ಸವಗಳನ್ನು ಆಚರಣೆ ಮಾಡಲಾಗುತ್ತದೆ.

ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವ ಕೆ ವೆಂಕಟೇಶ್ ಅವರು ಮಾತನಾಡಿ ಈ ವರ್ಷ ಉತ್ತಮ ಮಳೆಯಾಗಿ ಕೆರೆ ಕಟ್ಟೆಗಳು ಡ್ಯಾಂ ಗಳು ತುಂಬಿವೆ. ಜನರು ಸಮೃದ್ಧಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ನಾವು ಗಗನಚುಕ್ಕಿ ಭರಚುಕ್ಕಿ ಜಲಪಾತೋತ್ಸವ ಮಾಡಿದೆವು. ಇಂದು ಚುಂಚನಕಟ್ಟೆ ಯಲ್ಲಿ ಹಮ್ಮಿಕೊಳ್ಳಲಾಗಿದೆ. ಇಂತಹ ಉತ್ಸವಗಳ ಮೂಲಕ ಜನರಿಗೆ ಉತ್ತಮ ಮನರಂಜನೆ ನೀಡಲಾಗುತ್ತದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಿ. ಶಾಸಕರಾದ ಡಿ ರವಿಶಂಕರ್ ಅವರು ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ರವಿಶಂಕರ್ ಮಾತನಾಡಿ ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿ ಆಯ್ಕೆಯಾದ ಸಂದರ್ಭದಿಂದ ತಾಲ್ಲೂಕಿನ ಅಭಿವೃದ್ಧಿಗೆ  ಶ್ರಮಿಸಲಾಗುತ್ತಿದೆ. ಈ ಭಾಗದ ರೈತರ ಜೀವನಾಡಿ ಆದ ಶ್ರೀರಾಮ ಸಕ್ಕರೆ ಕಾರ್ಖಾನೆ ಯನ್ನು ನೊಂದಣಿ ಮಾಡಿಸಿ ಮುಂದಿನ ಜನವರಿಯಿಂದ ಪ್ರಾರಂಭವಾಗಿ ಮುನ್ನಡೆಯುತ್ತದೆ. ಕಪ್ಪಡಿಯ ಸೇತುವೆಯನ್ನು 25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು.

ಸಾಲಿಗ್ರಾಮ ಹೊಸ ತಾಲ್ಲೂಕು ಆಗಿದೆ ಆದರೆ ಅಲ್ಲಿ ಮಿನಿ ವಿಧಾನ ಸೌಧ ಇಲ್ಲ ಹಾಗೂ ತಾಲ್ಲೂಕು ಕಚೇರಿಗಳು ಇಲ್ಲ. ಮಾನ್ಯ ಕಂದಾಯ ಸಚಿವರು ಮುಂದಿನ ಬಜೆಟ್ ನಲ್ಲಿ ಸೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಈ ಒಂದು ಜಲಪಾತೋತ್ಸವ ಎರಡು ದಿನಗಳ ಕಾಲ ಇದ್ದು ಸಾರ್ವಜನಿಕರು ಭಾಗವಹಿಸಿ ಯಶಾಸ್ವಿಗೊಳಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

key words: Mysore, k.r.nagara, Dhanush Koti, jalapathosthsava, inaugurated by, dr.h.c.mahadevappa