ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

ಮೈಸೂರು, ಡಿಸೆಂಬರ್,4,2024 (www.justkannada.in): ಕುತ್ತಿಗೆ ಕೂಯ್ದು ಪತ್ನಿಯನ್ನು ಕೊಲೆ ಮಾಡಿದ ಪತಿ ನಂತರ ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ಈ ಘಟನೆ ನಡೆದಿದೆ. ಶೃತಿ ಕೊಲೆಯಾದ ಮಹಿಳೆ. ಅರುಣ್ ಎಂಬಾತನೇ ಪತ್ನಿಯನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ . ದಂಪತಿ 4 ವರ್ಷದ ಹಿಂದೆ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು. ಅರುಣ್ ಹಾಗೂ ಕುಟುಂಬಸ್ಥರು ವಿನಾ ಕಾರಣ ಆಗಾಗ್ಗೆ ಜಗಳವಾಡುತಿದ್ದರು ಎಂದು ಶೃತಿ ಪೋಷಕರು ಆರೋಪ ಮಾಡಿದ್ದಾರೆ.

ಸ್ಥಳಕ್ಕೆ ಹೆಬ್ಬಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕೆ.ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Key words: Husband, murdered, wife, mysore