ಮುಂಬೈ,ಡಿಸೆಂಬರ್,5,2024 (www.justkannada.in): ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೇರಿದ್ದು ನೂತನ ಸಿಎಂ ಆಗಿ ದೇವೇಂದ್ರ ಫಢ್ನಾವಿಸ್ ಅಧಿಕಾರ ಸ್ವೀಕಾರ ಮಾಡಿದರು.
ಮುಂಬೈನ ಅಜಾದ್ ಮೈದಾನದಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೂರನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಸಿ.ಪಿ ರಾಧಕೃಷ್ಣನ್ ಪ್ರತಿಜ್ಞಾವಿಧಿ ಬೋಧಿಸಿದರು.
ನಂತರ ಮಹಾಯುತಿ ಮೈತ್ರಿಕೂಟದ ಎನ್ಸಿಪಿ ನಾಯಕ ಅಜಿತ್ ಪವಾರ್ ಮತ್ತು ಶಿವಸೇನದ ನಾಯಕ ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಜೆಪಿ ನಡ್ಡಾ, ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಯರು, ಸಿನಿಮಾ ನಟರು ಉಪಸ್ಥಿತರಿದ್ದರು.
Key words: Devendra Fadnavis, oath, Maharashtra CM