ಬಳ್ಳಾರಿ,ಡಿಸೆಂಬರ್,7,2024 (www.justkannada.in): ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡವಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿ ಮಹಮ್ಮದ್ ರಫೀಕ್ ಸೇರಿ ಇತರೆ ಅಧಿಕಾರಿಗಳು ಮಕ್ಕಳ ವಾರ್ಡ್, ಹೆರಿಗೆ ವಾರ್ಡ್, ಔಷಧ ವಿತರಣಾ ವಿಭಾಗಕ್ಕೆ ಭೇಟಿ ಪರಿಶೀಲಿಸಿದರು.
ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಅಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಅವರಣದ ವೆರ್ ಹೌಸ್ ನಲ್ಲಿ ಪರಿಶೀಲನೆ ಮಾಡಲಾಗಿದೆ. ಈ ಸಂಬಂಧ ಲೋಕಾಯುಕ್ತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಇನ್ನು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
Key words: Lokayukta officials, visit , Bellary District Hospital