ಚಾಮರಾಜನಗರ, ಡಿಸೆಂಬರ್ 7,2024 (www.justkannada.in): ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಿ ಎಂದಿದ್ದರು. ಜೆ.ಹೆಚ್.ಪಟೇಲರಿಗೆ ಆಗಿನ ಕೆಲ ಶಾಸಕರು ಹೇಳಿದ್ದರು. ಪಾಪ ಆಗಿನಿಂದ ಆ ಕಳಂಕ ಚಾಮರಾಜನಗರ ಮೇಲಿದೆ. ನಾನು 2ನೇ ಬಾರಿ ಮುಖ್ಯಮಂತ್ರಿಯಾಗಿ ಚಾಮರಾಜನಗರಕ್ಕೆ ಬಂದಿದ್ದೇನೆ. ಈ ಮೂಢನಂಬಿಕೆಯನ್ನು ಅವರು ನಂಬಿರಲಿಲ್ಲ, ನಾನೂ ನಂಬಲಿಲ್ಲ ಎಂದರು.
ಚಾಮರಾಜನಗರಕ್ಕೆ ಬಂದು ಹೊಸ ಜಿಲ್ಲೆ ಘೋಷಣೆ ಮಾಡಿದ್ದೆವು. ಆಗ ನಾನು ಡಿಸಿಎಂ ಆಗಿದ್ದೆ. ನಾನು ಏನಿಲ್ಲ ಅಂದರೂ 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಳ್ಳುವ ಬದಲು ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: final stages, politics, CM Siddaramaiah