ಯಾವುದೇ ಕಾರಣಕ್ಕೂ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ- ಸಂಸದ ಯದುವೀರ್

ಮೈಸೂರು,ಡಿಸೆಂಬರ್,7,2024 (www.justkannada.in): ಯಾವುದೇ ಕಾರಣಕ್ಕೂ ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು  ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡಯರ್ ತಿಳಿಸಿದರು.

ಇಂದು ಮಾತನಾಡಿದ ಸಂಸದ ಯದುವೀರ್, ಕೇರಳ ಸರ್ಕಾರ ಕೂಡ ಐದು ಭಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿದ್ದರು. ಈ ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದ ವೇಳೆಯೂ ಕೂಡ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ  ಎಂದಿದ್ರು. ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಗೊತ್ತಿಲ್ಲ. ಹೈಕೋರ್ಟ್ ಆದೇಶ ಕೂಡ ಇದೆ.  ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಹೇಳಿದರು.

ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಸೂಕ್ತ ಕ್ರಮ

ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಉಡಾನ್ ಯೋಜನೆಯಡಿ ವಿಮಾನಗಳ ಹಾರಾಟಕ್ಕೆ ಉತ್ತೇಜ‌ನ‌ ನೀಡಲಾಗುತ್ತಿದೆ. ಎರಡು ಮೂರು ವಿಮಾನಯಾನ ಸಂಸ್ಥೆಗಳ‌ ಜೊತೆ ವಿಮಾನಗಳ ಹಾರಾಟ ಸಂಬಂಧ ಮಾತುಕತೆ ನಡೆಸಲಾಗುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.

ಕೆಂಪೇಗೌಡ ವೃತ್ತದ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಅನುಮೋದನೆ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಹತ್ತು ವರ್ಷಗಳಾಗಿವೆ. ಈ ಅವಧಿಯಲ್ಲಿ ವಿಶ್ವದ ಆರ್ಥಿಕತೆಯಲ್ಲಿ ಭಾರತ ಐದನೇ ಸ್ಥಾನಕ್ಕೇರಿದೆ. ಜನರ ಬದುಕನ್ನು ಉತ್ತಮಗೊಳಿಸಲು ಹಲವು ಜನಪರ ಯೋಜನೆಗಳು ಜಾರಿಯಾಗಿವೆ. ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿಯಾದ ಬಳಿಕವೂ ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮೈಸೂರು-ಬೆಂಗಳೂರು ಹೈವೇಯ ಕೆಂಪೇಗೌಡ ವೃತ್ತದ ಬಳಿ (ಮಣಿಪಾಲ್ ಆಸ್ಪತ್ರೆ ಬಳಿ) ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಶೀಘ್ರದಲ್ಲೇ ಇದಕ್ಕೆ ಟೆಂಡರ್ ಕರೆಯಲಾಗುವುದು. ಮೈಸೂರು-ಬೆಂಗಳೂರು ಹೈವೇಯಲ್ಲಿ ಬರುವ ಪ್ರಮುಖ ಪಟ್ಟಣಗಳಿಗೆ ಹೋಗಲು ಟೋಲ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಹೈವೇಯ ಎರಡು ಕಡೆ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ. ಸುಮಾರು 711 ಕೋಟಿ ಅಂದಾಜು ವೆಚ್ಚದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎಂದು ಸಂಸದ ಯದುವೀರ್ ತಿಳಿಸಿದರು.

Key words: Bandipur, night, traffic, restrictions, MP Yaduveer