ಬೆಳಗಾವಿ,ಡಿಸೆಂಬರ್,9,2024 (www.justkannada.in): ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ನಾಳೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ಶಾಸಕರು, ಸಂಸದರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.
ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಲವು ಆರೋಪ ಮಾಡಲಿರುವ ವಿಪಕ್ಷಗಳು ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ವಿಪಕ್ಷಗಳ ಆರೋಪಗಳಿಗೆ ಪ್ರತ್ಯುತ್ತರ ನೀಡಲು ‘ಕೈ’ ಪಡೆ ಸಿದ್ಧತೆ ನಡೆಸಿದ್ದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಪಾಠ ಮಾಡಲಿದ್ದಾರೆ.
ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ ಶಾಸಕರು.
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂಧ ನಡೆಯುವ ಚಳಿಗಾಲ ಅಧಿವೇಶನದಲ್ಲಿ ನೂತನ ಶಾಸಕರಾದ ಸಿಪಿ ಯೋಗೇಶ್ವರ್, ಅನ್ನಪೂರ್ಣ ತುಕಾರಾಂ, ಯಾಸಿರ್ ಪಠಾಣ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಸುವರ್ಣಸೌಧದ ಸಭಾಧ್ಯಕ್ಷರ ಕೊಠಡಿಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಪ್ರಮಾಣ ವಚನ ಸ್ವೀಕಾರದ ವೇಳೆ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.
Key words: winter, session, CM Siddaramaiah, meeting