ಬಾಣಂತಿಯರ ಸಾವಿನ ಬಗ್ಗೆ ಸದನದಲ್ಲೇ ಉತ್ತರ ಕೊಡಲು ಸಿದ್ದ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ,ಡಿಸೆಂಬರ್,9,2024 (www.justkannada.in):  ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಬಗ್ಗೆ ಗಂಭೀರ ಚರ್ಚೆಯಾಗಬೇಕು.  ವಿಪಕ್ಷಗಳಿಗೆ ಉತ್ತರ ಕೊಡಲು ಸಿದ್ದರಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬಾಣಂತಿರಯ ಸಾವು ಬಗ್ಗೆ ಸದನದಲ್ಲಿ ಗಂಭೀರವಾಗಿ ಚರ್ಚೆಯಾಗಬೇಕು. ವಿಪಕ್ಷಗಳಿಗೆ ಉತ್ತರ ಕೊಡಲು ರೆಡಿ ಇದ್ದೇವೆ. ಸಾವಿನ  ನಿಜಾಂಶದ ಬಗ್ಗೆ ಚರ್ಚೆಯಾಗಬೇಕು. ಬಾಣಂತಿರಯ ಸಾವಿದ ಬಗ್ಗೆ ರಾಜಕೀಯ ಮಾಡಬಾರದು. ಬಾಣಂತಿಯರ ಸಾವಿ ಬಗ್ಗೆ ಸದನದಲ್ಲೇ ಉತ್ತರ ಕೊಡುತ್ತೇನೆ ಎಂದರು.

Key words: Ready, answer, Health Minister, Dinesh Gundu Rao