ಬೆಳಗಾವಿ,ಡಿಸೆಂಬರ್,9,2024 (www.justkannada.in): ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಇತ್ತೀಚೆಗೆ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿದ್ದು ಹಲವು ಬಾರಿ ಬಿಜೆಪಿ ನಾಯಕರ ವಿರುದ್ದವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೆ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.
ಇಂದು ಮಾತನಾಡಿದ ಶಾಸಕ ಎಸ್ ಟಿ ಸೋಮಶೇಖರ್, ಒಂದಿಷ್ಟು ಬಿಜೆಪಿಗರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ರಾತ್ರಿ ವೇಳೆ ಭೇಟಿ ಮಾಡ್ತಾರೆ. ಆದರೆ ನಾನು ಡಿಸಿಎಂ ಅವರನ್ನ ರಾತ್ರಿ ಭೇಟಿ ,ಮಾಡಿಲ್ಲ. ಬೆಳಿಗ್ಗೆಯೇ ಭೇಟಿ ಮಾಡುತ್ತೇನೆ. ವಿಜಯೇಂದ್ರ ನೇರವಾಗಿ ಹೇಳಲಾಗದೆ ನನ್ನ ಹೆಸರು ಹೇಳ್ತಿದ್ದಾರೆ ಎಂದು ಟಾಂಗ್ ಕೊಟ್ಟರು.
ಕ್ಷೇತ್ರ ಕೆಲಸದ ವಿಚಾರದಲ್ಲಿ ಸಿಎಂ ಮತ್ತು ಡಿಸಿಎಂ ಭೇಟಿ ಮಾಡಿದ್ದೀನಿ. ನನ್ನ ವಿರುದ್ದ ಯಾವುದೇ ಕ್ರಮ ಕೈಗೊಂಡರೂ ಸ್ವಾಗತಿಸುತ್ತೇನೆ. ನನ್ನ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಕ್ರಮ ಜರುಗಿಸಲು ಹೇಳಿದವರಿಗೆ ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಎಂದು ಎಸ್ ಟಿ ಸೋಮಶೇಖರ್ ಟಾಂಗ್ ಕೊಟ್ಟರು.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಬಗ್ಗೆ ವರಿಷ್ಠರಿಗೆ ಮನವಿ ಮಾಡಲು ಶನಿವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.
Key words: Some, BJP members, meet, DK Shivakumar, MLA S.T. Somashekar