ಮಾಜಿ ಸಿಎಂ ಎಸ್ ಎಂ ಕೃಷ್ಣ’ ನಿಧನ : ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ: 3 ದಿನ ಶೋಕಾಚರಣೆ

ಬೆಂಗಳೂರು,ಡಿಸೆಂಬರ್,10,2024 (www.justkannada.in):  ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನರಾಗಿರುವ  ಹಿನ್ನಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.  ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು  ಮಧ್ಯರಾತ್ರಿ ನಿಧನರಾದರು.

ರಾಜ್ಯಾದ್ಯಂತ 3 ದಿನ ಶೋಕಾಚರಣೆ

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ನಡೆಸಲು ಸರ್ಕಾರ ಘೋಷಣೆ ಮಾಡಿದೆ.  ಘೋಷಿಸಲಾಗಿದೆ.

ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ಆದೇಶಿಸಿದೆ.

Key words: Former CM, SM Krishna, passes away, Government holiday