ವಿದ್ಯಾರ್ಥಿನಿಯರು ನೀರುಪಾಲು ಕೇಸ್: ಪ್ರಿನ್ಸಿಪಾಲ್ ಸಸ್ಪೆಂಡ್: ಸಿಬ್ಬಂದಿಗಳು ವಜಾ

ಕಾರವಾರ, ಡಿಸೆಂಬರ್ 11,2024 (www.justkannada.in): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾದ ಪ್ರಕರಣ ಸಂಬಂಧ ವಸತಿ ಶಾಲೆಯನ್ನ ಪ್ರಾಂಶುಪಾಲರನ್ನು ಅಮಾನತುಗೊಳಿಸಿ ಸಿಬ್ಬಂದಿಗಳನ್ನ ವಜಾ ಮಾಡಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಕೊತ್ತುರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮುರುಡೇಶ್ವರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಸುಮಾರು 54 ವಿದ್ಯಾರ್ಥಿನಿಯರು ಸಂಜೆ ಕಡಲಿನಲ್ಲಿ ಆಟವಾಡಲು ಇಳಿದಿದ್ದರು. ಈ ವೇಳೆ  ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದಾರೆ ಎನ್ನಲಾಗಿದೆ.

ಓರ್ವ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು ಉಳಿದ ಮೂವರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

ಪ್ರಿನ್ಸಿಪಾಲ್ ಸಸ್ಪೆಂಡ್, ಸಿಬ್ಬಂದಿ ವಜಾ

ಪ್ರಕರಣ ಸಂಬಂಧ ನಿರ್ಲಕ್ಷ್ಯ ಬೇಜವಾಬ್ದಾರಿತನ ಆರೋಪದ ಮೇಲೆ ವಸತಿ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು ಅಮಾನತುಗೊಳಿಸಲಾಗಿದೆ. ಅಥಿತಿ ಉಪನ್ಯಾಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅದೇಶ ಹೊರಡಿಸಿದ್ದಾರೆ.

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಸಮುದ್ರಪಾಲಾದ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕಡಲ ತೀರಕ್ಕೆ ತೆರಳದಂತೆ ಪ್ರವಾಸಿಗರಿಗೆ ಪೊಲೀಸರ ಸೂಚನೆ ನೀಡಿದ್ದಾರೆ.

Key words: students, Murudeshwara, Principal, suspended