ಬೆಂಗಳೂರು, ಡಿಸೆಂಬರ್ 12,2024 (www.justkannada.in): ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನ ಹೈಕೋರ್ಟ್ ರದ್ದುಗೊಳಿಸಿದೆ.
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ಶಾಸಕ ಯತ್ನಾಳ್ ವಿರುದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ದಾಖಲಿಸಿದ್ದರು. ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣವನ್ನ ಹೈಕೋರ್ಟ್ ರದ್ದುಗೊಳಿಸಿದೆ.
Key words: high Court ,quashes case, against, Basanagouda Patil Yatnal