ಉತ್ತರ ಕರ್ನಾಟಕ ವಿಚಾರದ ಬಗ್ಗೆ ಚರ್ಚೆಗೆ ಸಿದ್ಧ- ಸಿಎಂ ಸಿದ್ದರಾಮಯ್ಯ

ಬೆಳಗಾವಿ,ಡಿಸೆಂಬರ್,16,2024 (www.justkannada.in):  ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ನಾವು ಸಿದ್ದರಿದ್ದೇವೆ. ಹಾಗೆಯೇ  ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ಮೌನ ವಹಿಸಲು ಶಾಸಕ ಬಿ.ವೈ.ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದರು.

ಪಂಚಮಸಾಲಿಗಳ  ಸಮಾಜಕ್ಕೆ ಅನ್ಯಾಯ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪಂಚಮಸಾಲಿಗಳ ವಿಚಾರ ಯಾಕೆ ಇತ್ಯರ್ಥಪಡಿಸಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್  ಜೋಸಿ ಯಾಕೆ ಇತ್ಯರ್ಥ ಮಾಡಿಲ್ಲ.  ಯಾರು ಇತ್ಯರ್ಥಪಡಿಸಿಲ್ಲವೋ ಅವರು ಕ್ಷಮೆ ಕೇಳಬೇಕು ಎಂದು ಟಾಂಗ್ ಕೊಟ್ಟರು.

Key words: Ready, discussion, North Karnataka, CM Siddaramaiah