ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು,ಡಿಸೆಂಬರ್,17,2024 (www.justkannada.in): ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಆರೋಪ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಮೂಲಕ ಬಿವೈ ವಿಜಯೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.  ಈ ಹಿಂದೆ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಪ್ರಕರಣ ರದ್ದಾಗಿತ್ತು. ಇದೀಗ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಬಿವೈ ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಎಫ್‌ಐಆರ್ ರದ್ದುಗೊಳಿಸಿ ಆದೇಶಿಸಿದೆ.

Key words: High Court,  big relief , BY Vijayendra