ಬೆಂಗಳೂರು,ಡಿಸೆಂಬರ್,18,2024 (www.justkannada.in): ಬೆನ್ನುನೋವಿಗೆ ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಕಳೆದ 1 ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿದ್ದ ಆರೋಪಿ ನಟ ದರ್ಶನ್ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ
ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆದುಕೊಂಡಿದ್ದ ದರ್ಶನ್ ಫಿಜಿಯೋಥೆರಪಿ ಮಾಡಿಸಿದ್ದು, ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ದರ್ಶನ್ ಗೆ ಸಲಹೆ ನೀಡಿದ್ದಾರೆ. ಇದೀಗ ಪತ್ನಿ ಪುತ್ರನ ಜೊತೆ ನಟ ದರ್ಶನ್ ತೆರಳಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ನಟ ದರ್ಶನ್ ಬಿಡುಗಡೆಯಾಗಿದ್ದರು ಎನ್ನಲಾಗಿತ್ತು. ಆದರೆ ದರ್ಶನ್ ಕೋರ್ಟ್ ಗೆ ತೆರಳಿ ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ್ತೆ ಆಸ್ಪತ್ರೆಗೆ ವಾಪಸ್ ಆಗಿದ್ದರು.
Key words: Actor, Darshan, discharged, hospital