ಬೆಂಗಳೂರು,ಡಿಸೆಂಬರ್,20,2024 (www.justkannada.in): ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಬಂಧನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತು ಮಾತನಾಡಿದ ಆರ್.ಅಶೋಕ್, ಪೊಲೀಸ್ ವಶದಲ್ಲಿರುವ ಒಬ್ಬ ಪರಿಷತ್ ಸದಸ್ಯನಿಗೆ ತಮ್ಮ ಸರ್ಕಾರ ರಕ್ಷಣೆ ಕೊಡಲು ಆಗುತ್ತಿಲ್ಲ. ನಿಮ್ಮದು ರೌಡಿಗಳ ಗೂಂಡಾ ಸರ್ಕಾರವಿರಬಹುದು ಅಥವಾ ಸರ್ಕಾರದ ಭಾಗವಾಗಿರುವವರೇ ರೌಡಿಗಳು, ಗೂಂಡಾಗಳಾಗಿರಬೇಕು ಎಂದು ಕಿಡಿಕಾರಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ದೇಶದ್ರೋಹಿಗಳು ಯಾವುದೇ ಕಾನೂನು ಕ್ರಮವಿಲ್ಲದೆ ಹೊರಗಿದ್ದಾರೆ. ಆ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಂಡು, ಸುದ್ದಿ ಬಿತ್ತರಿಸಿದ ಮಾಧ್ಯಮಗಳ ಮೇಲೆ ಹೌಹಾರಿದವರು ಇನ್ನೂ ರಾಜಾರೋಷವಾಗಿ ಮಂತ್ರಿಗಳಾಗಿ ಗೂಟದ ಕಾರಿನಲ್ಲಿ ಓಡಾಡುತ್ತಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
Key words: MLC, CT Ravi, arrest, R. Ashok, state government