ಬೆಳಗಾವಿ,ಡಿಸೆಂಬರ್,20,2024 (www.justkannada.in): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರ ಜಾಮೀನು ಅರ್ಜಿ ಆದೇಶವನ್ನ ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯ ಕಾಯ್ದಿರಿಸಿದೆ.
ಪ್ರಕರಣ ಸಂಬಂಧ ನಿನ್ನೆ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ FIR ದಾಖಲಾಗಿತ್ತು. ಬಳಿಕ ಎಂಎಲ್ ಸಿ ಸಿ.ಟಿ ರವಿ ಅವರನ್ನ ಪೊಲೀಸರು ಬಂಧಿಸಿ ಇಂದು ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ವೇಳೆ ಎಂಎಲ್ ಸ ಸಿಟಿ ರವಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಸಿಟಿ ರವಿ ಪರವಾಗಿ ವಕೀಲ ಎಂಬಿ ಜಿರಲಿ ಅವರು ವಾದ ಮಂಡಿಸಿದರು. ವಾದ ಆಲಿಸಿದ ಬಳಿಕ ಜಡ್ಜ್ ಸಿಟಿ ರವಿ ಅವರ ಜಾಮೀನು ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿ ವಿಚಾರಣೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ. ಮಧ್ಯಾಹ್ನ ಸರ್ಕಾರದ ಪರ ವಕೀರಲು ವಾದ ಮಂಡನೆ ಮಾಡುವ ಸಾಧ್ಯತೆ ಇದೆ.
Key words: Court, reserves, bail order, MLC, CT Ravi