ಬೆಂಗಳೂರು,ಡಿಸೆಂಬರ್,20,2024 (www.justkannada.in): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಆರೋಪ ಪ್ರಕರಣ ಸಂಬಂಧ ಪೊಲೀಸ್ ಬಂಧನದಲ್ಲಿರುವ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ ರವಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ತಕ್ಷಣ ಸಿಟಿ ರವಿ ಅವರನ್ನ ಬಿಡುಗಡೆ ಮಾಡಬೇಕೆಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ನಿನ್ನೆ ಪೊಲೀಸರು ಎಂಎಲ್ ಸಿ ಸಿಟಿ ರವಿ ಅವರನ್ನ ಬಂಧಿಸಿ ಇಂದು ಬೆಳಗಾವಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಪ್ರಕರಣವನ್ನ ಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿತು. ಈ ಹಿನ್ನೆಲೆಯಲ್ಲಿ ಸಿಟಿ ರವಿ ಅವರನ್ನ ಬೆಂಗಳೂರಿಗೆ ಕರೆತರಲಾಗುತ್ತಿದೆ.
ಈ ಮಧ್ಯೆ ತಮ್ಮ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಸಿಟಿ ರವಿ ಅರ್ಜಿ ಸಲ್ಲಿಸಿದ್ದು ಈ ಕುರಿತು ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಪೀಠ ವಿಚಾರಣೆ ನಡೆಸಿತು. ಸಿಟಿ ರವಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಯಾವುದೇ ನೋಟಿಸ್ ನೀಡದೇ ಸಿಟಿ ರವಿ ಅವರನ್ನ ಬಂಧಿಸಲಾಗಿದೆ. ಸಿಟಿ ರವಿ ಅವರ ಅರೆಸ್ಟ್ ಅನ್ನೇ ನಾವು ಪ್ರಶ್ನಿಸಿದ್ದೇವೆ. ಬಂಧನವೇ ಕಾನೂನು ಬಾಹಿರವಾಗಿದ್ದರೇ ತಕ್ಷಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು.
ಇದೀಗ ಸಿಟಿ ರವಿ ಅವರನ್ನ ತಕ್ಷಣವೇ ಬಿಡುಗಡೆ ಮಾಡುವಂತೆ ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಪೀಠ ಆದೇಶಿಸಿದ್ದು ಜೊತೆಗೆ ತನಿಖೆಗೆ ಸಹಕರಿಸುವಂತೆ ಸಿಟಿ ರವಿ ಅವರಿಗೆ ಷರತ್ತು ಹಾಕಿದೆ.
Key words: High Court, orders. Release, MLC, CT Ravi