ಹೊಸ ವರ್ಷಾಚರಣೆಗೆ ದಿನಗಣನೆ: ಕಟ್ಟೆಚ್ಚರ ವಹಿಸಲು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್​ ಖಡಕ್​ ಸೂಚನೆ

ಬೆಂಗಳೂರು, ಡಿಸೆಂಬರ್​​ 23,2024 (www.justkannada.in):  ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದ್ದು, ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ ಅವರು ಖಡಕ್​​ ಸೂಚನೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಂತವರ ಮೇಲೆ ನಿಗಾವಹಿಸಿ, ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ, ಮುನ್ನೆಚ್ಚರಿಕೆ ವಹಿಸಿ. ಮಾಲ್ ​ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡುವಂತೆ ತಿಳಿಸಿದ್ದಾರೆ.

ಹಾಗೆಯೇ ಎಲ್ಲ ಪೊಲೀಸ್ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್​​ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು. ರಸ್ತೆ ಮೇಲೆ ಬಾಟಲಿ ಹೊಡೆದು ದಾಂಧಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಬೇಕು ಎಂದು ಬಿ.ದಯಾನಂದ್ ಸೂಚನೆ ನೀಡಿದ್ದಾರೆ.

ಹೆಣ್ಣುಮಕ್ಕಳನ್ನ ಚುಡಾಯುಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು. ಮದ್ಯ ಮಾರಾಟ ಜಾಗದಲ್ಲಿ ಗಲಾಟೆ, ದೊಂಬಿ, ಬಾಟಲಿ ಎಸೆಯುವವವರ ಮೇಲೆ ಕ್ರಮ ಕೈಗೊಳ್ಳಿ. ಜನ ಸೇರುವ ರಸ್ತೆ ಮತ್ತು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಿ. ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಿ. ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ, ಪ್ರಮುಖ ಪ್ರೈಓವರ್‌ಗಳ ಮೇಲೆ ವಾಹನ ಸಂಚಾರ ನಿಷೇಧಿಸಿ. ಮತ್ತು ಠಾಣೆಯ ಹೊಯ್ಸಳ ಮತ್ತು ಚೀತಾಗಳು ಸದಾ ಗಸ್ತು ನಿರ್ವಹಿಸಬೇಕು ಎಂದು ಪೊಲೀಸ್​ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

Key words: New Year, celebrations, Bengaluru Police Commissioner, Dayanand