ಸಿ.ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಕೇಸ್: ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ,ಡಿಸೆಂಬರ್,23,2024 (www.justkannada.in):  ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ  ಆಕ್ಷೇಪಾರ್ಹ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌  ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆಕ್ಷೇಪಾರ್ಹ ಪದ ಬಳಕೆ ಕುರಿತು ನನ್ನ ಬಳಿ ವಿಡಿಯೋ ದಾಖಲೆಗಳಿವೆ. ವಿಡಿಯೋ ಸಾಕ್ಷ್ಯ ಬಿಡುಗಡೆ ಮಾಡಿದ್ದೇನೆ.  ಸಿಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ. ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮನವಿ ಸಲ್ಲಿಸಿ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದರು.

ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ. ಘಟನೆ ಬಳಿಕ ಸಿಟಿ ರವಿ ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ.  ಪೊಲೀಸ್ ತನಿಖೆ ಬೇಗ ಆಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ವಿಡಿಯೋದಲ್ಲಿ ಏನಿದೆ?

18 ಸೆಕೆಂಡ್‌ ಇರುವ ವಿಡಿಯೋದಲ್ಲಿ ಸಿಟಿ ರವಿ ಅವರು ಎದ್ದುನಿಂತುಕೊಂಡು ಪೋಸ್ಟ್‌ ಹಿಡಿದು ಎದುರಿಗೆ ಇರುವವರ ವಿರುದ್ಧ ಧಿಕ್ಕಾರ ಕೂಗುತ್ತಿರುತ್ತಾರೆ. ಈ ಸಂದರ್ಭದಲ್ಲಿ ಕೊನೆಗೆ ಮೂರು ಬಾರಿ ಆಕ್ಷೇಪಾರ್ಹ ಪದ ಹೇಳಿದಂತೆ ಕೇಳಿಸುತ್ತದೆ.

Key words: CT Ravi,  offensive words, case, Minister, Lakshmi Hebbalkar