ಬೆಂಗಳೂರು,ಡಿಸೆಂಬರ್,24,2024 (www.justkannada.in): ಮಾಜಿ ಸಂಸದ ಡಿ.ಕೆ ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 8.41 ಕೋಟಿ ರೂ.ವಂಚನೆ ಚಿನ್ನದ ಅಂಗಡಿ ಮಾಲೀಕರೊಬ್ಬರಿಗೆ ವಂಚನೆ ಮಾಡಿದ್ದು ಈ ಸಂಬಂಧ ಎಫ್ ಐಆರ್ ದಾಖಲಾಗಿದೆ.
ಆರ್ ಆರ್ ನಗರ ನಿವಾಸಿ ಆಗಿರುವ ಐಶ್ವರ್ಯ ಗೌಡ ಎಂಬುವವರೇ ವಂಚನೆ ಮಾಡಿರುವುದು. ಐಶ್ವರ್ಯ ಗೌಡ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರು ದೂರು ನೀಡಿದ್ದಾರೆ. ಚಂದ್ರ ಲೇಔಟ್ ನಿವಾಸಿ ಆಗಿರುವ ವನಿತಾ ಐತಾಳ್ ಅವರು ಐಶ್ವರ್ಯ ಗೌಡ ವಿರುದ್ಧ ದೂರು ನೀಡಿದ್ದಾರೆ.
ಐಶ್ವರ್ಯ ಗೌಡ 2023ರ ಅಕ್ಟೋಬರ್ನಿಂದ 2024 ಏಪ್ರಿಲ್ ವರೆಗೆ ಹಂತ ಹಂತವಾಗಿ ಚಿನ್ನ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಐಶ್ವರ್ಯಳನ್ನ ಹಣ ಕೇಳಿದಾಗ ಡಿ ಕೆ ಸುರೇಶ್ ರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿದ್ದಾರೆ ಎಂದು ಎಫ್ಐಆರ್ನಲ್ಲಿ ದಾಖಲಾಗಿದೆ. ಅಲ್ಲದೆ ಸಿನಿಮಾ ಧರ್ಮೇಂದ್ರ ಎಂಬುವವರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಐಶ್ವರ್ಯ ಗೌಡ ಅವರ ಪತಿ ಹರೀಶ್ ಕೆ.ಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಕೇಳಿ ಬಂಧಿದ್ದು, ಈ ಬಗ್ಗೆ ಚಂದ್ರ ಲೇಔಟ್ನಲ್ಲಿರುವ ವಾರಾಹೀ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಈ ಕುರಿತು ಎಫ್ ಐಆರ್ ದಾಖಲಾಗಿದೆ.
Key words: Case, woman, Rs 8.41 crore, fraud, Name DK Suresh’s sister