ಬಳ್ಳಾರಿ, ಡಿಸೆಂಬರ್ 24,2024 (www.justkannada.in): ಜನವರಿ 16ರಿಂದ ಹಳ್ಳಿ ಹಳ್ಳಿಗಳಲ್ಲಿ ಪಂಚಮಸಾಲಿ ಜಾಗೃತಿ ಸಭೆ ನಡೆಸುತ್ತೇವೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಇಂದು ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಜನವರಿ 16ರಿಂದ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪಂಚಮಸಾಲಿ ಜಾಗೃತಿ ಸಭೆ ನಡೆಸಲಾಗುವುದು. ಮುಂದಿನ 3 ವರ್ಷ ಹೋರಾಟದ ಮೂಲಕ ಜಾಗೃತಿ ಮೂಡಿಸುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮನ್ನು ಕೇವಲವಾಗಿ ನಡೆಸಿಕೊಂಡಿದೆ. ಬಹಳ ಅಪಮಾನ ಮಾಡಿದೆ. ಹೋರಾಟ ವೇಳೆ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿಸಿದರು. ಲಾಠಿಚಾರ್ಜ್ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಸರ್ಕಾರ ಈವರೆಗೆ ಪಂಚಮಸಾಲಿಗಳ ಕ್ಷಮೆ ಕೇಳಿಲ್ಲ. ಮೀಸಲಾತಿ ಕೊಡಲು ಆಗಲ್ಲ ಎಂದು ಸಿಎಂ ನೇರವಾಗಿ ಹೇಳಿದ್ದಾರೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ತಿಳಿಸಿದರು.
Key words: 2A reservation, government, Jaya Mrityunjaya Swamiji