ಹಾವೇರಿ,ಡಿಸೆಂಬರ್,25,2024 (www.justkannada.in): ನೆಲಮಂಗಲದ ಬಳಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿಯ ತಡಸ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಿಮ್ಮಾಪುರ ಗ್ರಾಮದ ಬಳಿ ಈ ಅಪಘಾತವಾಗಿದ್ದು, ಬೆಂಗಳೂರು ಚಾಮರಾಜಪೇಟೆಯ ಚಂದ್ರಮ್ಮ (59), ಅವರ ಮಗಳು ಮೀನಾ (38), ಕಾರು ಚಾಲಕ ಮಹೇಶಕುಮಾರ ಸಿ. (41) ಹಾಗೂ ಧನ್ವೀರ್ (11) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅತೀ ವೇಗವಾಗಿ ಹೊರಟಿದ್ದ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇದರಿಂದಾಗಿ, ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿಯೇ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
Key words: Fatal accident, Four ,die