ಡಿ. 27ರಂದು “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಡಿಸೆಂಬರ್ 25,2024 (www.justkannada.in): ‌ ಡಿಸೆಂಬರ್ 27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂಬ ಹೆಸರಿನಿಂದ ಕಾಯಬೇಕಾಗಿದೆ ಎಂದು  ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್  ಅವರು, ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ ಎಂದರು.

ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Jai Bapu, Jai Bhim, Jai Constitution, convention , DCM D.K. Shivakumar