ಬೆಂಗಳೂರು,ಡಿಸೆಂಬರ್,25,2024 (www.justkannada.in): ಕಸ ವಿಲೇವಾರಿ ಗುತ್ತಿಗೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್. ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸ್ಪೀಕರ್ ಗೆ ಎಸ್ ಐಟಿ ಪತ್ರ ಬರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಸ ವಿಲೇವಾರಿ ಗುತ್ತಿಗೆ ನೀಡುವುದಕ್ಕೆ ಗುತ್ತಿಗೆದಾರ ಚಲುವರಾಜು ಎಂಬುವವರ ಬಳಿ 30 ಲಕ್ಷ ವಂಚಕ್ಕೆ ಬೇಡಿಕೆ ಇಟ್ಟ ಆರೋಪ ಶಾಸಕ ಮುನಿರತ್ನ ವಿರುದ್ದ ಕೇಳಿ ಬಂದಿತ್ತು. ಈ ಸಂಬಂಧ ಭ್ರಷ್ಟಾಚಾರ ನಿಗ್ರಹದಡಿ ಕೇಸ್ ದಾಖಲಾಗಿತ್ತು.. ಈ ಪ್ರಕಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿತ್ತು.
ಇದೀಗ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಮುನಿರತ್ನ ವಿರುದ್ದ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ಆಗಬೇಕಿದೆ. ಹೀಗಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿ ಎಂದು ಮನವಿ ಮಾಡಿದ್ದಾರೆ.
Key words: MLA, Munirathna, SIT, permission, prosecution