ಡಾ. ಮನಮೋಹನ್ ಸಿಂಗ್’ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ

ನವದೆಹಲಿ,ಡಿಸೆಂಬರ್,27,2024 (www.justkannada.in): ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮದರ್ಶನವನ್ನ ಹಲವು ಗಣ್ಯಾತೀಗಣ್ಯರು ಪಡೆಯುತ್ತಿದ್ದಾರೆ.

ದೆಹಲಿಯ ಮೋತಿಲಾಲ್ ನೆಹರು ಮಾರ್ಗ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು ಕಾಂಗ್ರೆಸ್  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ  ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವರು ಅಂತಿಮ ನಮನ ಸಲ್ಲಿಸಿದರು.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Key words: Sonia Gandhi, last respects, Former PM, Dr. Manmohan Singh