ಚಾಮರಾಜನಗರ,ಜನವರಿ,8,2025 (www.justkannada.in): ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಪವಿತ್ರಾ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿದ್ದು, ಕ್ಯಾಬಿನೆಟ್ ಮೀಟಿಂಗ್ ಗೆ ದಿನಾಂಕ ಫಿಕ್ಸ್ ಆಗಿದೆ.
ಫೆಬ್ರವರಿ 15 ಮತ್ತು 16 ರಂದು ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಪ್ರವಾಸ ಕೈಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸ್ಥಳೀಯ ಶಾಸಕ ಮಂಜುನಾಥ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು.
ಸಚಿವ ಸಂಪುಟ ಸಭೆಗಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಸಭೆಗೆ ಬರುವಂತಹ ಗಣ್ಯರಿಗೆ ಯಾವುದೇ ತೊಂದರೆ ಆಗದಂತೆ ಸಕಲ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಧಿಕಾರ ಸಿದ್ದತಾ ಕಾರ್ಯ ಕೈಗೊಂಡಿದೆ.
ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಿನ್ನೆ ಸಂಜೆಯೇ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ಕೊಟ್ಟು ಇಂದು ಸ್ಥಳೀಯ ಶಾಸಕರ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಉಸ್ತುವಾರಿ ಸಚಿವರ ಜೊತೆಗೆ ಜಿಲ್ಲಾಧಿಕಾರಿ ಶಿಲ್ಪನಾಗ್, ಪ್ರಾಧಿಕಾರ ಕಾರ್ಯದರ್ಶಿ ರಘು ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಇನ್ನು ಸೂಕ್ತ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಸೂಚನೆ ನೀಡಿದರು.
Key words: cabinet meeting, Male Mahadeshwara Hills, Minister, Venkatesh