ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ಫೆಬ್ರವರಿ 25ಕ್ಕೆ ಮುಂದೂಡಿಕೆ

ಬೆಂಗಳೂರು,ಜನವರಿ,10,2025 (www.justkannada.in):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿಚಾರಣೆಯನ್ನ ಫೆಬ್ರವರಿ 25ಕ್ಕೆ 57ನೇ ಸಿಸಿಹೆಚ್ ನ್ಯಾಯಾಲಯ  ಮುಂದೂಡಿಕೆ ಮಾಡಿದೆ.

ಪ್ರಕರಣ ಸಂಬಂಧ  ಇಂದು ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದರು. ಈ ಮಧ್ಯೆ  ಕೋರ್ಟ್ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿಕೆ ಮಾಡಿದೆ.

ಕೋರ್ಟ್ ಹಾಲ್ ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಮುಖಾಮುಖಿಯಾದರು. ಇಬ್ಬರಿಗೂ ಜಾಮೀನು ಸಿಕ್ಕಿದ್ದು, ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರದಿಂದ ಮೇಲ್ಮನವಿ ಸಲ್ಲಿಕೆಯಾಗಿದೆ.

Key words: Renukaswamy, murder case, Hearing, February 25